Mangalore: The Shakthi Group of Institutions in Shakthinagar celebrated the Independence day jointly. Sri K.C Naik, the Managing Trustee of Shree Gopalakrishna Temple spoke on the occasion after hoisting the National Flag and gave a call to the students to render dedicated service to the nation.
Vidya Kamath G. the principal of the School welcomed the gathering. Pradyuth, Manasa and Prabhakara G.S, the Principal of the college addressed the gathering on the importance of the day.
Dr. Muralidhar Naik, the trustee of the Shakthi Education Trust, Baikady Janardana Achar, the administrator, Naseem Banu Institute Development officer, Ramesh K, the chief advisor and Neema Saxena, the co-ordinator of SGK Pre-school were present. Chethana compered the programme and Rishiq Moideen proposed the vote of thanks.
ಶಕ್ತಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವ
ಮಂಗಳೂರು: ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪ್ರಿ-ಸ್ಕೂಲ್, ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು. ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಸಿ ನಾೖಕ್ ಧ್ವಜಾರೋಹಣಗೈದು ದೇಶಕ್ಕಾಗಿ ಪ್ರತಿಯೊಬ್ಬರೂ ತ್ಯಾಗ ಮಾಡಲು ಸಿದ್ಧರಿರಬೇಕು ಎಂದು ಕರೆಯಿತ್ತರು. ಶಾಲಾ ಪ್ರಾಚಾರ್ಯರಾಗಿರುವ ವಿದ್ಯಾ ಕಾಮತ್ ಜಿ. ಸ್ವಾಗತಿಸಿದರು.
ವಿದ್ಯಾರ್ಥಿಗಳ ಪರವಾಗಿ ಪ್ರದ್ಯುಷ್ ಹಾಗೂ ಮಾನಸ, ಭಾರತದ ಸ್ವಾತಂತ್ರ್ಯದ ಇತಿಹಾಸದ ಕುರಿತಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್ ಸ್ವಾತಂತ್ರ್ಯದ ಹಿನ್ನೆಲೆ ಹಾಗೂ ಮಹತ್ವದ ಬಗ್ಗೆ ತಿಳಿಸಿದರು. ಮೂರೂ ಸಂಸ್ಥೆಯ ವಿದ್ಯಾರ್ಥಿಗಳು ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಿದರು.
ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಸದಸ್ಯ ಡಾ. ಮುರಳೀಧರ ನಾೖಕ್ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಪ್ರಧಾನ ಸಲಹೆಗಾರ ರಮೇಶ್ ಕೆ., ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು, ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯಸ್ಥೆ ನೀಮಾ ಸಕ್ಸೇನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಚೇತನಾ ಕಾರ್ಯಕ್ರಮ ನಿರೂಪಿಸಿ, ರಿಷಿಕ್ ಮೊದಿನ್ ವಂದಿಸಿದರು.