ಶಕ್ತಿ ವಸತಿ ಶಾಲೆಯಲ್ಲಿ ಹಿಂದಿ ದಿನಾಚರಣೆ
ಮಂಗಳೂರು: ಇಲ್ಲಿನ ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಸೆಪ್ಟೆಂಬರ್ 4 ರಂದು ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಹಿಂದಿ ವಿಭಾಗದ ನಿವೃತ್ತ ಮುಖ್ಯಸ್ಥಡಾ. ಮುರಳೀಧರ ನಾಕ್ ಭಾರತಕ್ಕೆ ಸ್ವಾತಂತ್ರ್ಯ ಬಂದು 73 ವರ್ಷಗಳು ಉರುಳಿದರೂ ದೇಶದ ಅಧಿಕ ಮಂದಿ ಮಾತನಾಡುವ ಹಿಂದಿ ಭಾಷೆಯನ್ನು ರಾಷ್ಟ್ರಭಾಷೆಯನ್ನಾಗಿ ಸ್ವೀಕರಿಸದೆ ಇರುವುದು ಖೇದಕರ ಸಂಗತಿ ಎಂದರು. ಹಿಂದಿ ಭಾಷೆಜಗತ್ತಿನ ಪ್ರಮುಖ ಭಾಷೆಗಳಲ್ಲಿ ಒಂದು. ಅದು ಸಾಹಿತ್ಯಿಕವಾಗಿ ತುಂಬಾ ಶ್ರೀಮಂತ ಭಾಷೆ. ಹೆಚ್ಚು ಹೆಚ್ಚು ಭಾಷೆಗಳನ್ನು ಕಲಿತಷ್ಟು ನಾವು ಹೆಚ್ಚು ಪ್ರಯೋಜನ ಪಡೆಯುತ್ತೇವೆ, ವಿದ್ಯಾರ್ಥಿಗಳು ಭಾಷೆಯ ಅಧ್ಯಯನದ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದು ಕರೆಯಿತ್ತರು.
ಶಿಕ್ಷಕಿ ಚಿತ್ರಾಎಸ್. ಹಿಂದಿ ದಿನಾಚರಣೆಯ ಮಹತ್ವದ ಕುರಿತಾಗಿ ಮಾತನಾಡಿದರು. ಆರ್. ನಾಗರತ್ನಮ್ಮ ಅತಿಥಿಗಳನ್ನು ಪರಿಚಯಿಸಿದರು. ಸಾಲೊನಿ ಅತಿಥಿಗಳನ್ನು ಸ್ವಾಗತಿಸಿ, ಚಿರಂತನ ವಂದಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಪ್ರಾಚಾರ್ಯೆ ವಿದ್ಯಾ ಕಾಮತ್ ಜಿ. ವಹಿಸಿದ್ದರು. ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು, ಪ್ರಧಾನ ಸಲಹೆಗಾರ ರಮೇಶ್ ಕೆ. ಉಪಸ್ಥಿತರಿದ್ದರು.