ಶಕ್ತಿನಗರ : ದೇಶದ ಎಲ್ಲಾ ಪ್ರಜೆಗಳು ಹಾಗೂ ವಿಶೇಷವಾಗಿ ವಿದ್ಯಾರ್ಥಿಗಳು ನಮ್ಮ ಸಂವಿಧಾನದ ಬಗ್ಗೆ ಅಧ್ಯಯನ ಮಾಡಬೇಕು, ರಾಷ್ಟ್ರದ ನೀತಿ-ನಿಯಮಗಳ ಚೌಕಟ್ಟಿನ ಅರಿವು ನಮಗಿರಬೇಕು, ಸಂವಿಧಾನ ರಚಿಸುವಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರು ನಿರ್ವಹಿಸಿದ್ದ ಜವಾಬ್ದಾರಿಯಷ್ಟೇ ನಮ್ಮ ಜಿಲ್ಲೆಯ ಬೆನಗಲ್ ನರಸಿಂಹರಾಯರು ವಹಿಸಿದ್ದರು ಎಂಬುದನ್ನು ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ. ಯು. ಕಾಲೇಜಿನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಸಿದ ನ್ಯಾಯವಾದಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಶ್ರೀ ವಿವೇಕಾನಂದ ಪನಿಯಾಲ ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಹೇಳಿದರು.
ಆರಂಭದಲ್ಲಿ ಡಾ. ಬಿ. ಆರ್. ಅಂಬೇಡ್ಕರ್, ಮಹಾತ್ಮಾಗಾಂಧಿ ಹಾಗೂ ನೇತಾಜಿ ಸುಭಾಶ್ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಹೂ ಎಸಳುಗಳನ್ನು ಅರ್ಪಿಸಿ ಗೌರವಾರ್ಪಣೆ ಸಲ್ಲಿಸಲಾಯಿತು. ಶಾಲಾ ವಿದ್ಯಾರ್ಥಿ ಚಿರಂತನಾ ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೆ. ಸಿ. ನಾೖಕ್ ವಹಿಸಿದ್ದರು.
ಆರಂಭದಲ್ಲಿ ಕಾಲೇಜು ಪ್ರಾಚಾರ್ಯ ಪ್ರಭಾಕರ ಜಿ. ಎಸ್. ಸ್ವಾಗತಿಸಿ ಕೊನೆಯಲ್ಲಿ ಶಾಲಾ ಪ್ರಾಚಾರ್ಯೆ ವಿದ್ಯಾ ಕಾಮತ್ ಜಿ. ವಂದಿಸಿದರು. ಶಿಕ್ಷಕಿ ಸಂಗೀತಾ ಮರೀನಾ ಪೆರಿಸ್ ಕಾರ್ಯಕ್ರಮ ನಿರೂಪಿಸಿದರು.