ಮಂಗಳೂರಿನ ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಂದ ಹಾಗೂ ಶಿಕ್ಷಕರಿಂದ ಸಹಿ ಸಂಗ್ರಹ ಅಭಿಯಾನವನ್ನು ಚಾಲನೆಗೊಳಿಸಲಾಯಿತು. ’ವಿದ್ಯಾಭಾರತಿ ಕರ್ನಾಟಕ’ ದ ನೇತೃತ್ವದಲ್ಲಿ ನಡೆಯುತ್ತಿರುವ ಈ ಅಭಿಯಾನ ಶಕ್ತಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಡಾ.ಕೆ.ಸಿ. ನಾೖಕ್ ಸಹಿ ಹಾಕುವ ಮೂಲಕ ಚಾಲನೆ ನೀಡಿದರು.
ಸಹಿ ಹಾಕಿ ಚಾಲನೆ ನೀಡಿದ ಅವರು ಭಾರತೀಯ ಸಂಸ್ಕೃತಿ ಹಾಗೂ ಸಂಸ್ಕಾರದ ರಕ್ಷಣೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಅತ್ಯಂತ ಮುಖ್ಯ. ಪ್ರಪಂಚ ಶೈಕ್ಷಣಿಕವಾಗಿ ತುಂಬಾ ಮುಂದಿದೆ. ಭಾರತ ಆ ವೇಗವನ್ನು ತಲುಪಬೇಕಾದರೆ ರಾಷ್ಟ್ರೀಯ ಶಿಕ್ಷಣ ನೀತಿ ತುಂಬಾ ಅಗತ್ಯ. ಇವನ್ನು ನಾವು ಪ್ರೋತ್ಸಾಹಿಸಬೇಕಾಗಿದೆ ಎಂದು ಹೇಳಿದರು. ಸಹಿ ಸಂಗ್ರಹಣ ಅಭಿಯಾನದಲ್ಲಿ ಸುಮಾರು ೮೦೦ ವಿದ್ಯಾರ್ಥಿಗಳು 100 ಕ್ಕೂ ಹೆಚ್ಚು ಸಿಬ್ಬಂದಿಗಳು ಭಾಗವಹಿಸಿದರು.
ಶಕ್ತಿ ವಸತಿ ಶಾಲೆ ಪ್ರಾಂಶುಪಾಲ ರವಿಶಂಕರ ಹೆಗಡೆ, ಉಪಪ್ರಾಂಶುಪಾಲ ದೀಪಕ್ ಕುಡ್ವ, ಶಿಕ್ಷಕರು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.