ಮಂಗಳೂರು: ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಟೆಕ್ವಾಂಡೊ ಚಾಂಪಿಯನ್ಶಿಪ್ ಹಾವೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ದಿನಾಂಕ 3-12-2024 ರಿಂದ 4-12-2024 ರವರೆಗೆ ನಡೆಯಿತು.
ಈ ಚಾಂಪಿಯನ್ಶಿಪ್ನಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು SGFI ರಾಷ್ಟ್ರೀಯ ಮಟ್ಟಕ್ಕೆ ಅಯ್ಕೆಯಾಗಿರುತ್ತಾನೆ. ಅದೇ ರೀತಿ ಹರ್ಷವೇಣಿ ಬಾಲಕಿಯ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾಳೆ.
ಈ ಸಂಧರ್ಭದಲ್ಲಿ ಇವರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್, ಕಾರ್ಯದರ್ಶಿ ಶ್ರೀ ಸಂಜಿತ್ ನಾೖಕ್. ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.