ವಿ
ದ್ಯಾಭಾರತಿ ಕರ್ನಾಟಕದ ವತಿಯಿಂದ ಬೀದರ್‌ನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಶಕ್ತಿ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಮರ್ಥ್ ಶೆಟ್ಟಿ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ಗೆದ್ದಿದ್ದಾರೆ.
ಈ ಸಾಧನೆಯೊಂದಿಗೆ ಸಮರ್ಥ್ ಶೆಟ್ಟಿ ಅವರು ಮುಂದಿನ ತಿಂಗಳು ತೆಲಂಗಾಣದಲ್ಲಿ ನಡೆಯಲಿರುವ ಕ್ಷೇತ್ರೀಯ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ.ಸಿ. ನಾೖಕ್, ಕಾರ್ಯದರ್ಶಿಗಳಾದ ಶ್ರೀ ಸಂಜಿತ್ ನಾೖಕ್, ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಶಕ್ತಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ಶ್ರೀಮತಿ ಸುರೇಖಾ ಆರ್ ಭಟ್ ಅಭಿನಂದಿಸಿದ್ದಾರೆ. ಅಲ್ಲದೆ, ಮುಂದಿನ ಕ್ಷೇತ್ರೀಯ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.


