ಮಂಗಳೂರು: ಶಕ್ತಿ ವಸತಿ ಶಾಲೆಯಲ್ಲಿ ಸಪ್ಟೆಂಬರ್ 22 ರಂದು ಶಿಕ್ಷಕರಿಗಾಗಿ ತರಗತಿ ಸಂವಹನ ಕಲೆ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ವಿಷಯದ ಕುರಿತು ಶಾಲೆಯ ಶಿಕ್ಷಕರಿಗಾಗಿ ಒಂದು ದಿನದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರಾವಳಿ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಮಾಧುರಿ ಶ್ರೀರಾಮ್ ಅವರು ಮಾತನಾಡಿ, ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬರ ಪ್ರಗತಿಗೂ ಸಂವಹನ ಕಲೆ ಅತಿ ಅಗತ್ಯವಾದುದು ಎಂದು ತಿಳಿಸಿದರು. ಅಲ್ಲದೆ ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಕ್ರಮದ ಪ್ರಾಮುಖ್ಯತೆಯ ಬಗ್ಗೆ ತಿಳಿಸಿಕೊಟ್ಟರು.
ಮತ್ತೊಬ್ಬ ಮುಖ್ಯ ಅತಿಥಿ ಆಸರೆ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷೆ ಡಾ. ಆಶಾ ಜ್ಯೋತಿ ರೈ ಅವರು ಮಾತನಾಡಿ, ಉತ್ತಮವಾದ ಮಾತುಗಾರಿಕೆಯು ಯಾವುದೇ ಕ್ಷೇತ್ರದಲ್ಲಿ ಗುರಿಮುಟ್ಟಲು ನೆರವು ನೀಡುತ್ತದೆ. ಆದ್ದರಿಂದ ಸಂವಹನದಲ್ಲಿ ಸೃಜನಶೀಲತೆಯನ್ನು ಅಳವಡಿಸಿಕೊಳ್ಳಿ ಎಂಬ ಕಿವಿಮಾತನ್ನು ತಿಳಿಸಿದರು.
ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರಾದ ಶ್ರೀ ಕೆ.ಸಿ. ನಾಕ್, ಆಡಳಿತ ಮಂಡಳಿ ಸದಸ್ಯೆ ಶ್ರೀಮತಿ ಸಗುಣ ಸಿ. ನಾಕ್, ಆಡಳಿತಾಧಿಕಾರಿ ಶ್ರೀ ಬೈಕಾಡಿ ಜನಾರ್ದನ ಆಚಾರ್, ಮಾರ್ಗದರ್ಶಕ ಶ್ರೀ ರಮೇಶ್. ಕೆ, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಶ್ರೀಮತಿ ನಸೀಂ ಬಾನು, ಶ್ರೀ ಗೋಪಾಲಕೃಷ್ಣ ಪ್ರಿ ಸ್ಕೂಲ್ನ ನೀಮಾ ಸಕ್ಸೇನಾ ಮುಂತಾದವರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಶ್ರೀ ಪ್ರಭಾಕರ ಜಿ.ಎಸ್ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ಶ್ರೀಮತಿ ಶಶಿಕಲಾ ಎಂ.ಎನ್ ನಿರೂಪಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ಅಶ್ವಿತಾ ವಂದಿಸಿದರು.