ಶಕ್ತಿನಗರ: ಇಲ್ಲಿನ ಶಕ್ತಿ ವಸತಿ ಶಾಲೆಯಲ್ಲಿ ದಿನಾಂಕ 17 ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಶಕ್ತಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಅಧಿಕಾರಿ ಶ್ರೀಮತಿ ನಸೀಮಾ ಬಾನು ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಸಂವಿಧಾನ ಎಂದರೆ ದೇಶದ ಪ್ರಜೆಗಳು ಪಾಲಿಸಬೇಕಾದ ಕಾನೂನು – ನಿಯಮಗಳು. ಈ ಕಾನೂನು ನಿಯಮಗಳನ್ನು ಪ್ರತಿಯೊಬ್ಬ ಪ್ರಜೆ ಪಾಲಿಸಿದಾಗ ಮಾತ್ರ ದೇಶದ ಆಡಳಿತ ಸುಗಮವಾಗಿ, ಪ್ರಗತಿಯತ್ತ ಸಾಗಲು ಸಾಧ್ಯವಾಗುತ್ತದೆ ಎಂದರು.
ಆರಂಭದಲ್ಲಿ ಶಾಲಾ ಪ್ರಾಚಾರ್ಯರಾದ ಶ್ರೀಮತಿ ವಿದ್ಯಾ ಕಾಮತ್ ಜಿ. ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಶ್ರೀ ಗೋಪಾಲ ಕೃಷ್ಣ ಪ್ರಿ ಸ್ಕೂಲಿನ ಮುಖ್ಯಸ್ಥೆ ಶ್ರೀಮತಿ ನೀಮಾ ಸಕ್ಸೇನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಪೂರ್ಣಿಮ ಧನ್ಯವಾದ ಸಮರ್ಪಿಸಿದರು.