ಮಂಗಳೂರು: ಇಲ್ಲಿನ ಶಕ್ತಿನಗರದ ಶಕ್ತಿ ಸಮೂಹ ಸಂಸ್ಥೆಗಳ ಶಿಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಮೇ 18 ರ ಪೂರ್ವಾಹ್ನ ನಡೆಯಿತು. ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ್ ಶ್ರೀ ಕೆ.ಸಿ ನಾೖಕ್ ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿಕ್ಷಕರ ಜ್ಞಾನ ನಿಂತ ನೀರಾಗಬಾರದು, ಶಿಕ್ಷಕರು ನಿರಂತರ ಅಧ್ಯಯನಶೀಲರಾಗಿದ್ದುಕೊಂಡು ಸಂವಹನ ಕೌಶಲ್ಯಗಳನ್ನು ಕರಗತ ಮಾಡಿಕೊಂಡು, ಬೋಧನ ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು, ವಿದ್ಯಾರ್ಥಿ ಮಿತ್ರರಾಗಿದ್ದುಕೊಂಡು ಅವರ ಕಲಿಕಾ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸದಾ ನೆರವಾಗಬೇಕು, ಯಾವುದೇ ಒತ್ತಡವಿಲ್ಲದೆ ವಿದ್ಯಾರ್ಥಿಗಳು ಕಲಿಕಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳುವಂತೆ ಸದಾ ಪ್ರೇರಣೆ ನೀಡಬೇಕು ಎಂದು ತನ್ನ ಉದ್ಘಾಟನಾ ಭಾಷಣದಲ್ಲಿ ಹೇಳಿದರು.
ಆರಂಭದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್. ಸ್ವಾಗತಿಸಿ, ಶಕ್ತಿ ಎಜ್ಯುಕೇಶನ್ ಟ್ರಸ್ಟ್ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಶಿಕ್ಷಕರ ಸೇವಾವಧಿಯಲ್ಲಿ ನಿರಂತರ ತರಬೇತಿಯ ಅವಶ್ಯಕತೆಯ ಕುರಿತಾಗಿ ಮಾತನಾಡಿದರು. ಶಕ್ತಿ ವಸತಿ ಶಾಲೆಯ ಪ್ರಾಚಾರ್ಯೆ ಶ್ರೀಮತಿ ವಿದ್ಯಾಕಾಮತ್ ಜಿ. ಕೊನೆಯಲ್ಲಿ ವಂದಿಸಿದರು.
ತರಬೇತುದಾರ ಸಂಸ್ಥೆ ಭಕ್ತಿವೇದಾಂತ ಅಕಾಡೆಮಿ ಫಾರ್ ಕಲ್ಚರಲ್ ಎಂಡ್ ಕ್ಯಾರಾಕ್ಟರ್ ಎಜ್ಯುಕೇಶನ್ ಇದರ ಸಂಪನ್ಮೂಲ ವ್ಯಕ್ತಿಗಳಾಗಿರುವ ಶ್ರೀ ಶರದ್ ವಿಹಾರಿದಾಸ ಹಾಗೂ ಶ್ರೀ ಪ್ರಭಾಕರ ಶೆಟ್ಟಿ ಸಮಯೋಚಿತವಾದ ಮಾತುಗಳನ್ನಾಡಿದರು. ಶಕ್ತಿ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಡಾ. ಮುರಳೀಧರ ನಾೖಕ್, ಅಭಿವೃದ್ಧಿ ಅಧಿಕಾರಿ ಶ್ರೀಮತಿ ನಸೀಮ್ ಬಾನು, ಪ್ರಧಾನ ಸಲಹೆಗಾರ ಶ್ರೀ ರಮೇಶ್ ಕೆ. ಉಪಸ್ಥಿತರಿದ್ದರು.