ಮಂಗಳೂರು ಜು 6 : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈಜು ಸ್ಪರ್ಧೆಯಲ್ಲಿ ಪದಕಗಳನ್ನು ಸಾಧನೆ ಮಾಡಿದ್ದಾರೆ. ಶಕ್ತಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯಾಗಿರುವ ಎಂ. ದೇವಿಕಾ ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಎನ್.ಆರ್.ಜೆ ರಾಜ್ಯ ಮಟ್ಟದ ಸಬ್ ಜೂನಿಯರ್ ಈಜು ಸ್ಪರ್ಧೆಯ 400 ಮೀಟರ್ ಫ್ರೀ ಸ್ಟೈಲ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದುಕೊಂಡು ಈ ಸಾಧನೆಯೊಂದಿಗೆ ಭಾರತೀಯ ಈಜು ಪ್ರಾಧಿಕಾರವು ಗುಜರಾತಿನ ರಾಜಾಕೋಟ್ನಲ್ಲಿ ಕಳೆದ ತಿಂಗಳ ಅಂತ್ಯದಲ್ಲಿ ಏರ್ಪಡಿಸಿದ್ದ ರಾಷ್ಟ್ರಮಟ್ಟದ ಈಜು ಸ್ಫರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದಾರೆ.
ಇದೇ ತಿಂಗಳ ದಿನಾಂಕ 16 ಮತ್ತು 17 ರಂದು ಹಾಸನದಲ್ಲಿ ನಡೆದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಶಕ್ತಿ ವಸತಿ ಶಾಲೆಯ ಮತ್ತೊರ್ವ ವಿದ್ಯಾರ್ಥಿನಿಯಾದ ಕೀರ್ತನ ಬೇಕಲ್ ಅವರು 50 ಮೀಟರ್ ಬ್ರೆಸ್ಸ್ಟ್ರೋಕ್ನಲ್ಲಿ ಬೆಳ್ಳಿ ಪದಕ ಮತ್ತು 4×50 ಫ್ರೀ ಸ್ಟೈಲ್ ರೀಲೆ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿರುತ್ತಾರೆ. ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾದ ದಿಯಾ ಶೆಟ್ಟಿ 400 ಮೀಟರ್ ಫ್ರೀ ಸ್ಟೈಲ್, 100 ಮೀಟರ್ ಫ್ರೀ ಸ್ಟೈಲ್ ಮತ್ತು 50 ಮೀಟರ್ ಬ್ರೆಸ್ ಸ್ಟ್ರೋಕ್ ವಿಭಾಗದಲ್ಲಿ 3 ಚಿನ್ನದ ಪದಕಗಳನ್ನು ಗೆದ್ದುಕೊಂಡು ಶಾಲಾ ಆಡಳಿತ ಮಂಡಳಿಯ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಶಾಲಾ ಆಡಳಿತಾಧಿಕಾರಿಗಳಾದ ಡಾ. ಕೆ.ಸಿ. ನಾೖಕ್, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ, ಪ್ರಧಾನ ಸಲಹೆಗಾರ ರಮೇಶ್.ಕೆ, ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ ಮತ್ತು ಈಜು ತರಬೇತಿದಾರ ರಾಜೇಶ್ ಕಾರ್ವಿ ಉಪಸ್ಥಿತರಿದ್ದರು.