ಮಂಗಳೂರು- ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿಪೂರ್ವ ಕಾಲೇಜಿನ 2023 ಹಾಗೂ 2024 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಮಂಗಳಾ ಸ್ಟೇಡಿಯಂನಲ್ಲಿ ನೇರವೇರಿಸಲಾಯಿತು.
ಈ ಕ್ರೀಡಾಕೂಟದಲ್ಲಿ ಅತಿಥಿಗಳಾಗಿ ಆಗಮಿಸಿದ ಮಂಗಳೂರು ದಕ್ಷಿಣ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರೂ, ದಕ್ಷಿಣಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿಗಳಾದ ಶ್ರೀ ಹರೀಶ್ ರೈ ಅವರು ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಧ್ವಜಾರೋಣ ನೆರವೇರಿಸಿ ಮಾತನಾಡಿ ಕ್ರೀಡಾ ಸಾಮರಸ್ಯವನ್ನು ಮೆರೆಯಬೇಕು, ದೈಹಿಕ ಸದೃಢತೆಯನ್ನು ಕಾಯ್ದುಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿದೆ. ಸ್ವಸ್ಥ ಮನಸ್ಸಿನಲ್ಲಿ ಆರೋಗ್ಯಯುತ ಯೋಚನೆಗಳಿದ್ದರೆ ಯಾವುದೇ ಕೆಲಸದಲ್ಲಿ ಯಶಸ್ಸು ಸಿಗುತ್ತದೆ ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ. ಮಾತನಾಡಿ ಶಕ್ತಿ ವಿದ್ಯಾಸಂಸ್ಥೆ ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಕ್ರೀಡಾ ಪ್ರತಿಭೆಗಳನ್ನು ಕೊಡುಗೆಯಾಗಿ ನೀಡುತ್ತಾ ಬಂದಿದೆ. ವಿದ್ಯಾರ್ಥಿಗಳ ಸವಾಂಗೀಣ ಅಭಿವೃದ್ಧಿಗಾಗಿ ಸಕಲ ಸೌಲಭ್ಯವನ್ನು ಒದಗಿಸುತ್ತಾ ಬಂದಿದೆ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಥೆ ಅತ್ಯುತ್ತಮ ಅವಕಾಶ ನೀಡುತ್ತಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಎಚ್, ಶಕ್ತಿ ವಸತಿಶಾಲೆಯ ಪ್ರಾಂಶುಪಾಲ ರವಿಶಂಕರ ಹೆಗಡೆ, ಶಕ್ತಿ ಪೂರ್ವಪ್ರಾಥಮಿಕ ಶಾಲೆಯ ಸಂಯೋಜಕಿ ಪೆಟ್ರಿಶಿಯಾ ಪಿಂಟೋ ಉಪಸ್ಥಿತರಿದ್ದರು. ಶಕ್ತಿ ವಸತಿ ಶಾಲೆ ಹಾಗೂ ಪದವಿಪೂರ್ವ ಕಾಲೆಜಿನ 1500 ವಿದ್ಯಾರ್ಥಿಗಳು ಹಾಗೂ 300 ಕ್ಕೂ ಹೆಚ್ಚು ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಕರ್ಷಕ ಪಥಸಂಚಲನದೊಂದಿಗೆ ಆರಂಭವಾದ ಕಾರ್ಯಕ್ರವನ್ನು ಶಿಕ್ಷಕಿ ಭವ್ಯ ಅಮೀನ್ ಸ್ವಾಗತಿಸಿದರೆ, ಉಪನ್ಯಾಸಕ ಓಂಪ್ರಕಾಶ್ ವಂದಿಸಿದರು, ಉಪನ್ಯಾಸಕಿ ಚೈತ್ರಾ ಭಂಡಾರಿ ನಿರೂಪಿಸಿದರು.