ಮಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ದ.ಕ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಟೆಕ್ವಾಂಡೊ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಶಕ್ತಿ ಪಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ರಿಜ್ವಿತ್ ಜಗದೀಶ್, ಹರ್ಷವೇಣಿ ಮತ್ತು ತೋಷಿತ ಎಮ್ ಮುಂದಿನ ತಿಂಗಳು ಹಾವೇರಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಟೆಕ್ವಾಂಡೊ ಸ್ಪರ್ಧೆಯಲ್ಲಿ ದ.ಕ ಜಿಲ್ಲಾ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ.
ಈ ಸಂದರ್ಭದಲ್ಲಿ ಕಾಲೇಜಿನ ಸಂಸ್ಥಾಪಕರಾದ ಡಾ. ಕೆ. ಸಿ. ನಾಕ್, ಕಾರ್ಯದರ್ಶಿ ಶ್ರೀ ಸಂಜಿತ್ ನಾಕ್. ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.